19ರಂದು 14ನೇ ವರ್ಷದ ಗಜಾನನೋತ್ಸವದ ಅಂಗವಾಗಿ ಆಯೋಜನೆ
ಗದಗ, ಸೆ.17: ನಗರದ ಎಸ್.ಎಂ. ಕೃಷ್ಣಾನಗರದ ಗಜಾನನ ಯುವಕ ಸೇವಾ ಸಮಿತಿ ವತಿಯಿಂದ 14ನೇ ವರ್ಷದ ಗಜಾನನೋತ್ಸವದ ಅಂಗವಾಗಿ ರಾಷ್ಟ್ರಮಟ್ಟದ ಟಗರಿನ ಪಂದ್ಯಾವಳಿಯನ್ನು ಸೆಪ್ಟೆಂಬರ್ 19ರಂದು ಆಯೋಜಿಸಲಾಗಿದೆ
.ಸೆ.19ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಎಸ್.ಎಂ. ಕೃಷ್ಣಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.12ರ ಆವರಣದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಸಮಿತಿ ತಿಳಿಸಿದೆ.
ಗದಗ ಜಿಲ್ಲಾ ಕಾಂಗ್ರೆಸ್ ಯುವ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಯುವ ಘಟಕ ಹಾಗೂ ಗಜಾನನ ಯುವಕ ಸೇವಾ ಸಮಿತಿ ಅಧ್ಯಕ್ಷ ಅನಿಲಕುಮಾರ ಸಿದ್ದಮ್ಮನಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ 1ನೇ ವಾರ್ಡ್ ನಗರಸಭಾ ಸದಸ್ಯೆ ಲಕ್ಷ್ಮೀ ಅನಿಲಕುಮಾರ ಸಿದ್ದಮ್ಮನಹಳ್ಳಿ, 4ನೇ ವಾರ್ಡ್ ನಗರಸಭಾ ಸದಸ್ಯೆ ಶಕುಂತಲಾ ಹೊಳೆಬಸಪ್ಪ ಅಕ್ಕಿ, ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ವಸಂತ ಸಿದ್ದಮ್ಮನಹಳ್ಳಿ, ಗದಗ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಸವರಾಜ ಕಡೇಮನಿ ಹಾಗೂ ಆದಿಕವಿ ಮಹರ್ಷಿ ವಾಲ್ಮೀಕಿ ವಿವಿಧೋದ್ದೇಶ ಸೇವಾ ಸಂಘದ ಅಧ್ಯಕ್ಷರು ಮತ್ತು ಗದಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಉಪಾಧ್ಯಕ್ಷ ವಸಂತ ಸಿದ್ದಮ್ಮನಹಳ್ಳಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಹೊಳೆಬಸಪ್ಪ ಅಕ್ಕಿ, ಎಲ್.ಎಫ್. ಮುಲ್ಲಾನವರ, ದುದ್ದುಗೌಡ ಪಾಟೀಲ, ಜನಾರ್ಧನ ಹವಳೆ, ಉಮರಫಾರೂಕ ಬಾರಿಗಿಡದ, ಪ್ರಕಾಶ ಕಲಬುರ್ಗಿ, ಮಹಾಂತೇಶ ಮಣ್ಣಮ್ಮನವರ, ಶೇಖರ ರಾಟಿ, ರಾಜೇಸಾಬ ಕನಕ್ಯಾನವರ, ಸಿದ್ದಪ್ಪ ಹೊಸಳ್ಳಿ, ಸಿದ್ದಲಿಂಗಯ್ಯ ನಮಸ್ತೆಮಠ, ರಾಜು ಕವಳಿಕಾಯಿ, ಪರಶುರಾಮ ಬಳ್ಳಾರಿ ಹಾಗೂ ರಾಮು ಬಾಗಲಕೋಟೆ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ಹಾಲು ಹಲ್ಲಿನ ಮರಿಕುರಿ, ಎರಡು ಹಲ್ಲಿನ ಮರಿ, ನಾಲ್ಕು ಹಲ್ಲಿನ ಮರಿ ಹಾಗೂ ಎಂಟು ಹಲ್ಲಿನ ಮರಿ ವಿಭಾಗಗಳಲ್ಲಿ ಟಗರುಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.ಗಜಾನನೋತ್ಸವದ ಅಂಗವಾಗಿ ನಡೆಯಲಿರುವ ಈ ರಾಷ್ಟ್ರಮಟ್ಟದ ಪಂದ್ಯಾವಳಿಗೆ ವಿವಿಧ ಭಾಗಗಳಿಂದ ಸ್ಪರ್ಧಿಗಳು ಹಾಗೂ ಟಗರು ಪ್ರೇಮಿಗಳು ಆಗಮಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮದ ಯಶಸ್ಸಿಗಾಗಿ ಗಜಾನನ ಯುವಕ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಿದ್ಧತೆ ಕೈಗೊಂಡಿದ್ದಾರೆ.ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶವಿದ್ದು, ಆಸಕ್ತರು ನಿಯಮಾನುಸಾರ ಭಾಗವಹಿಸಬಹುದು ಎಂದು ಗಜಾನನ ಯುವಕ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಶ ಗಡಾದ ತಿಳಿಸಿದ್ದಾರೆ.
